ಪಿಯುಸಿ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಹರಪನಹಳ್ಳಿ : ಪಟ್ಟಣದ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ಕಳೆದ ೨೬ ವರ್ಷಗಳಿಂದ ಸಮಾಜ ಸೇವೆ ಮತ್ತು ಕನ್ನಡದ ಕೈಂಕರ್ಯಗಳನ್ನು ಮಾಡುತ್ತಾ ಬಂದಿದ್ದು, ಪ್ರಸ್ತುತ ೨೦೨೩-೨೪ ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ” ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಿಯುಸಿ ಪರೀಕೆಯಲ್ಲಿ ಕನ್ನಡ ವಿಷಯದಲ್ಲಿ ೯೫ ಕ್ಕೂ ಹೆಚ್ಚು ಅಂಕಗಳನ್ನು ಪಡೆದು ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯ ಪಠ್ಯಕ್ರಮದಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ “ಕನ್ನಡ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು, ಆಸಕ್ತ ವಿದ್ಯಾರ್ಥಿಗಳು ದಿನಾಂಕ ೨೦/೪/೨೦೨೪ ಸಂಜೆ ೫ ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿ. ಅರ್ಜಿಯನ್ನು ಪಡೆಯುವ ಮತ್ತು ಸಲ್ಲಿಸುವ ವಿಳಾಸ ಸಪ್ನಮಲ್ಲಿಕಾರ್ಜುನ ಅಧ್ಯಕ್ಷರು, ನವಜ್ಯೋತಿ ಸೌಹಾರ್ದ ಬ್ಯಾಂಕ್, ಬಸಮ್ಮ ನಿಲಯ, ಗೊರವಿನ ತೋಟ, ವಿಜಯಲಕ್ಷ್ಮಿ ಗ್ಯಾಸ್ ಏಜೆನ್ಸಿ ಹತ್ತಿರ, ಹರಪನಹಳ್ಳಿ. ಹೆಚ್ಚಿನ ಮಾಹಿತಿಗಾಗಿ ೭೭೯೫೯೬೬೦೮೧, ೭೮೯೯೦೭೩೨೬೮