ಹರಪನಹಳ್ಳಿ : ತಟ್ಟಿ ವೆಂಕೋಬರಾವ್ ಬಡ ವಿದ್ಯಾರ್ಥಿಗಳ ಪಾಲಿನ ಆಶಾಕಿರಣವಾಗಿ, ಉಚಿತ ಶಿಕ್ಷಣವನ್ನು ನೀಡುವುದರ ಜೊತೆಗೆ ಸಾಹಿತ್ಯ, ಸಂಗೀತ ಮತ್ತು ವಕೀಲ ವೃತ್ತಿಯಲ್ಲೂ ಸೇವೆಯನ್ನು ಸಲ್ಲಿಸಿ ವಿದ್ಯಾರ್ಥಿಗಳ ಮನದಾಳದಲ್ಲಿ ಶಾಶ್ವತವಾಗಿ ನೆಲೆ ನಿಂತು ಉತ್ತಮ ಶಿಕ್ಷಕರೆನಿಸಿಕೊಂಡಿದ್ದಾರೆ ಎಂದು ಎಸ್.ಯು.ಜೆ.ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಮಲ್ಲಿಕಾರ್ಜುನ ಅಭಿಪ್ರಾಯ ಪಟ್ಟರು. ಪಟ್ಟಣದ ಹಿಪ್ಪಿ ತೋಟದ ಧನ್ವಂತ್ರಿ ಕ್ಲಿನಿಕ್ ಹಾಲ್ನಲ್ಲಿ ನಡೆದ ತಟ್ಟಿ ವೆಂಕೋಬರಾವ್ ಇವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರಳ, ಸಜ್ಜನ, ತಾಳ್ಮೆ ಮತ್ತು ಶಾಂತ […]