ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ” ಪ್ರಶಸ್ತಿ ಪ್ರದಾನ

Spread the love

ಹರಪನಹಳ್ಳಿ : ಪಟ್ಟಣದ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆಯು ಪ್ರತಿ ವರ್ಷದಂತೆ ಈ ವರ್ಷವೂ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ (ಕನ್ನಡ ಮಾಧ್ಯಮ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನ್ನಡ ವಿಷಯದಲ್ಲಿ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಮತ್ತು ೧೨೪, ೧೨೩, ೧೨೨, ೧೨೧, ೧೨೦ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ “ಕನ್ನಡ ರತ್ನ” ಪ್ರಶಸ್ತಿ ನೀಡಿ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ, ಶಾಲು, ಕಿರೀಟ, ಕನ್ನಡ ಪುಸ್ತಕ ನೀಡಿ ಹೂಮಳೆಗರೆದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಅರಿವು ಮೂಡಿಸಿ ಅಭಿಮಾನ ಹೆಚ್ಚಿಸಲು ಈ ಕಾರ್ಯಕ್ರಮವನ್ನು ಮಾಡಲಾಗುವುದು. ಸಪ್ನ ಮಲ್ಲಿಕಾರ್ಜುನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡುವರು. ದಿನಾಂಕ ೧೧ ನೇ ಆಗಸ್ಟ್ ೨೦೨೪ರ ರವಿವಾರ ಬೆಳಿಗ್ಗೆ ೧೦-೦೦ ಗಂಟೆಗೆ ಬಸಮ್ಮ ಕಲಾಮಂದಿರ, ಗ್ಯಾಸ್‌ಏಜೆನ್ಸಿ ಹತ್ತಿರ, ಗೊರವಿನತೋಟ, ಹರಪನಹಳ್ಳಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಗಳು ಕನ್ನಡ ನಾಡಿನ ಹಿರಿಮೆ ಮತ್ತು ಸಂಸ್ಕೃತಿಗೆ ತಕ್ಕಂತೆ ಗೌರವಯುತವಾದ ಉಡುಗೆ-ತೊಡುಗೆಯೊಂದಿಗೆ ಬರತಕ್ಕದ್ದು. ವಿದ್ಯಾರ್ಥಿಗಳೊಂದಿಗೆ ತಂದೆ-ತಾಯಿ, ಪೋಷಕರು ಅಥವಾ ಶಿಕ್ಷಕರು ಭಾಗವಹಿಸಿ ಕಣ್ತುಂಬಿಕೊಳ್ಳಬಹುದು ಎಂದು ಎಸ್.ಯು.ಜೆ.ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top